ರೈತರ ಆಕ್ರೋಶ

0
203

ಗದಗ ಪ್ರತಿನಿಧಿ ವರದಿ
ಈರುಳ್ಳಿ ಖರೀದಿ ಕೇಂದ್ರ ಸರ್ಕಾರ ದಿಢೀರ್ ಬಂದ್ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
 
 
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
 
 
ಡಂಬಳ ಗ್ರಾಮದ ಎಪಿಎಂಸಿ ಆವರಣದಲ್ಲಿರುವ ಖರೀದಿ ಕೇಂದ್ರದ ಬಳಿ ನೂರಾರು ರೈತರು ಹಾಜರಿದ್ದು, ಕೇಂದ್ರದ ಅಧಿಕಾರಿಗಳಿಗಾಗಿ ಕಾಯುತ್ತಿದ್ದಾರೆ. ಬೆಳಗ್ಗೆಯಿಂದ ವಿವಿಧ ಗ್ರಾಮಗಳಿಂದ ರೈತರು ಆಗಮಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಗದಗ-ಮುಂಡರಗಿ ಹೆದ್ದಾರಿಯಲ್ಲಿ ಪ್ರತಿಭಟನೆ ಮುಂದುವರಿದಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here