ಲೋಕಾ ದಾಳಿ

0
462

ಬೆಂಗಳೂರು ಪ್ರತಿನಿಧಿ ವರದಿ
ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 5 ಕಡೆ ದಾಳಿ ನಡೆಸಿದ್ದಾರೆ. ಉಪಲೋಕಾಯುಕ್ತ ನ್ಯಾ.ಸುಭಾಷ್ ಬಿ.​ ಅಡಿ ಆದೇಶದಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
 
 
3 ಆರ್​​ಟಿಒ ಚೆಕ್​ಪೋಸ್ಟ್​​, 2 ವಾಣಿಜ್ಯ ತೆರಿಗೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಆರ್​ಟಿಒ ಚೆಕ್​ಪೋಸ್ಟ್​ ಮೇಲೆ ಲೋಕಾಯುಕ್ತ ಡಿವೈಎಸ್​ಪಿ ಚಿಕ್ಕಸ್ವಾಮಿ ನೇತೃತ್ವದಲ್ಲಿ ಮತ್ತು ಬಳ್ಳಾರಿಯ ಹಗರಿ ವಾಣಿಜ್ಯ ತೆರಿಗೆ ಇಲಾಖೆ ಚೆಕ್‌ಪೋಸ್ಟ್‌ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಆರ್​​ಟಿಒ ಚೆಕ್​ಪೋಸ್ಟ್​​ ಮೇಲೆ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಎಸ್​ಪಿ ಅಬ್ದುಲ್ಲಾ ಅಹ್ಮದ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬಾಗೇಪಲ್ಲಿಯಲ್ಲಿ 1.5 ಲಕ್ಷ ರೂ. ನಗದು ಪತ್ತೆಯಾಗಿದೆ. ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here