ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

0
362

 
ಮ0ಗಳೂರು ಪ್ರತಿನಿಧಿ ವರದಿ
ಜುಲೈ 8 ರಂದು ಕರ್ನಾಟಕ ಸರಕಾರದ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಮಂಗಳೂರು ತಾಲೂಕು ಪಂಚಾಯತ್ ನ ವತಿಯಿಂದ ತಾಲೂಕು ಪಂಚಾಯತ್ ಆವರಣದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನು ಇವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
 
 
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನುರವರು ಮಾತನಾಡಿ ವನಮಹೋತ್ಸವದ ಅಂಗವಾಗಿ ಗಿಡನೆಡುವ ಕಾರ್ಯಕ್ರಮ ಅತ್ಯಂತ ಮಹತ್ವದ, ಪುಣ್ಯದಾಯಕ ಕಾರ್ಯಕ್ರಮವಾಗಿದ್ದು, ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಕೂಡಾ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಅಲ್ಲದೇ ಸರಕಾರಿ ಸಿಬ್ಬಂದಿಗಳು ತಮ್ಮ ಮನೆಗಳಲ್ಲಿ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿ ವಿನಂತಿಸಿದರು.
 
 
 
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಂ ಗೋಪಾಲಕೃಷ್ಣ ಭಟ್ ಇವರು ಮಾತನಾಡಿ ಸರಕಾರ ಜುಲೈ 1 ರಿಂದ 10ನೇ ದಿನಾಂಕದವರೆಗೆ ಕೋಟಿ ವೃಕ್ಷ ಗಿಡ ನೆಡುವ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಪರಿಸರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ತುಂಬಾ ಸಹಕಾರಿಯಾಗುತ್ತದೆ ಅಲ್ಲದೆ ಪೃಕೃತಿಯನ್ನು ಉಳಿಸುವುದು, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದೇ ನಾವು ನಮ್ಮ ಮುಂದಿನ ಜನಾಂಗಕ್ಕೆ ನೀಡುವ ಬಳುವಳಿಯಾಗಿದೆ ಎಂದು ತಿಳಿಸಿದರು.
 
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಛೇರಿಯ ಸಿಬ್ಬಂದಿ ವರ್ಗ, ಅಕ್ಷರದಾಸೋಹ ಇಲಾಖೆ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here