ವರ್ಷಧಾರೆ ಅವಾಂತರ

0
137

ರಾಷ್ಟ್ರೀಯ ಪ್ರತಿನಿಧಿ ವರದಿ
ಕಲಬುರಗಿಯಲ್ಲಿ ಪ್ರವಾಹ ಸ್ಥಿತಿ ಇಂದೂ ಮುಂದುವರಿದಿದೆ. ಜಿಲ್ಲೆಯ ಸೆಡಂ ತಾಲೂಕಿನ ಮಳಖೇಡ ಬಳಿಯ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
 
 
ಮಳೆಯಿಂದಾಗಿ ಚಿತ್ತಾಪುರ ತಾಲ್ಲೂಕಿನ ದಂಡೋತಿ ಮತ್ತು ಸೇಡಂ ತಾಲ್ಲೂಕಿನ ಮಳಖೇಡ ಸೇತುವೆಗಳು ಕೂಡ ಮುಳುಗಡೆಯಾಗಿವೆ. ಇದರಿಂದ ಲಾರಿಯೊಂದು ನದಿಯಲ್ಲಿ ಮುಳುಗಿದೆ. ಸೇಡಂ ಕಲಬುರಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನದಿಪಾತ್ರದ ಗ್ರಾಮಗಳಿಗೆ ನದಿ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ.
 
 
ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತ ಪರಿಣಾಮ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಲಬುರ್ಗಿ ಹಾಗೂ ಬೀದರ್ ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
 
 
ಉಭಯ ರಾಜ್ಯಗಳಲ್ಲಿ ಮಳೆ ಅರ್ಭಟ:
ವರ್ಷಧಾರೆ ಅಬ್ಬರಕ್ಕೆ ಆಂಧ್ರಪ್ರದೇಶ ಮತ್ತು ತೆಲಂಗಾಣ ತತ್ತರಿಸಿ ಹೋಗಿದೆ. ಮಹಾಮಳೆಗೆ ಉಭಯ ರಾಜ್ಯಗಳಲ್ಲಿ 13 ಮಂದಿ ದುರ್ಮರಣ ಹೊಂದಿದ್ದಾರೆ. 3 ಎನ್ ಡಿ ಆರ್ ಎಫ್ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ. ಹೈದರಾಬಾದ್ ನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
 
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜಾಪುರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದ್ದು, ತಾಲ್ಲೂಕಿನ ಕಲ್ಲೋಳ ಮತ್ತು ಯಡೂರ ಗ್ರಾಮಗಳ ಮಧ್ಯದ ಕೆಳಮಟ್ಟದ ಸೇತುವೆ ಶುಕ್ರವಾರ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

LEAVE A REPLY

Please enter your comment!
Please enter your name here