ವರ್ಷಾಚರಣೆಗೆ ಕಟ್ಟುನಿಟ್ಟಿನ 21 ಷರತ್ತುಗಳು

0
151

ಮಂಗಳೂರು ಪ್ರತಿನಿಧಿ ವರದಿ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಆಚರಣೆ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಡೆಯಲು 21 ಕಾನೂನುಬದ್ಧ ಷರತ್ತುಗಳನ್ನು ವಿಧಿಸಿದ್ದಾರೆ.
 
 

 • ಈ ಷರತ್ತುಗಳನ್ನು ಈಗಾಗಲೇ ನಗರದಲ್ಲಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಕ್ಲಬ್ ಮತ್ತು ಸಂಘಸಂಸ್ಥೆಗಳಿಗೆ ರವಾನಿಸಿದ್ದಾರೆ.
 • ಡಿ.31ರಂದು ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು.
 • ಮದ್ಯಪಾಲ ಸರಬರಾಜು ಮಾಡುವ ಹೋಟೆಲ್-ರೆಸ್ಟೋರೆಂಟ್ ಗಳಲ್ಲಿ ಸರ್ಕಾರದ ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯ ಕಾರ್ಯಾಚರಿಸಲು
 • ಅಬಕಾರಿ ಇಲಾಖೆಯಿಂದ ಲಿಖಿತ ಅನುಮತಿಯನ್ನು ಪಡೆದು, ಆ ಪತ್ರದ ಪ್ರತಿವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು.
 • ಅಬಕಾರಿ ಇಲಾಖೆಯಿಂದ ಅನುಮತಿ ಪಡೆಯದಿದ್ದರೂ ಎಲ್ಲಾ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆಯೊಳಗೆ ಮುಗಿಸಬೇಕು.
 • ಉದ್ಯಾವನ, ಕ್ರೀಡಾಂಗಣ, ರೈಲ್ವೆ-ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸುವ ಹೊಸ ವರ್ಷಾಚರಣೆ ಸಂಭ್ರಮದ ನೆಪದಲ್ಲಿ ವೇಳೆ ಧೂಮಪಾನ, ಮಧ್ಯಪಾನ ಮಾಡುವಂತಿಲ್ಲ.
 • ಹೊಸ ವರ್ಷಾಚರಣೆ ನಡೆಸಲು ಇಚ್ಛಿಸುವವರು ಹಾಗೂ ಈ ಸಂದರ್ಭದಲ್ಲಿ ಧ್ವನಿವರ್ಧಕ ಅಳವಡಿಸಲು ಡಿ.31ರ ಸಂಜೆ 4 ಗಂಟೆಯೊಳಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆಯಬೇಕು.
 • ಧ್ವನಿವರ್ಧಕ ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಇರಬೇಕು.
 • ಆಚರಣೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಆಶ್ಲೀಲ/ಕೀಟಲೆ/ಅಸಭ್ಯವಾಗಿ ಇರಬಾರದು.
 • ವಿದ್ಯಾರ್ಥಿಗಳು ಹೊಸ ವರ್ಷಾಚರಣೆ ನೆಪದಲ್ಲಿ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುತ್ತದೆ.
 • ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.
 • ಮದ್ಯಪಾನ ಮಾಡಿ ವಾಹನ ಚಲಾಯಿಸುವಂತಿಲ್ಲ.
 • ಹಾಗೆಯೇ ರಾತ್ರಿ ವೇಳೆ ವಾಹನಗಳನ್ನು ವೀಲಿಂಗ್ ಮಾಡುವುದು, ಬೊಬ್ಬೆ ಹಾಕುವುದು, ಕರ್ಕಶ ಶಬ್ದ ಮಾಡುವುದನ್ನು ತಡೆಯಲು ಸಂಚಾರ ಪೊಲೀಸರು ರೆಡಿಯಾಗಿದ್ದಾರೆ.
 • ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರೇ ಮುಂಜಾಗ್ರತಾ ಕ್ರಮಗಳು ಸೇರಿದಂತೆ 21 ಸೂಚನೆಗಳನ್ನು ಪಾಲಿಸುವಂತೆ ಮಂಗಳೂರು ನಗರ ಪೊಲೀಸರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here