ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ

0
245

ನಮ್ಮ ಪ್ರತಿನಿಧಿ ವರದಿ
ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಭೈರಪ್ಪ ಇವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ವಿನಿಮಯ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
 
 
 
 
ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಹಾಗೂ ಇತರ ವಿಭಾಗಗಳಿಗೆ ಭೇಟಿ ನೀಡಿದರು.
 
 
 
ಇದಕ್ಕೆ ಪ್ರತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಾಣಿಜ್ಯ ಹಾಗೂ ವ್ಯವಹಾರ ಕ್ಷೇತ್ರಕ್ಕೆ ಸಂಬಂಧಪಟ್ಟ ಹಲವಾರು ವಿಷಯಗಳ ಬಗ್ಗೆ ಸಂವಹನ ಕಾರ್ಯಕ್ರಮ ನಡೆಯಿತು.
 
 
 
ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವುಗಳ ನಡುವೆ ಮೊದಲ ಬಾರಿಗೆ ಇಂತಹ ಕಾರ್ಯಕ್ರಮವು ಆಯೋಜನೆಗೊಂಡಿದ್ದು, ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳು ನಡೆಯಬೇಕೆಂಬ ಆಶಯ ವ್ಯಕ್ತವಾಯಿತು. ಎರಡೂ ಸಂಸ್ಥೆಗಳ ಸುಮಾರು 250 ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
 
 
 
ಈ ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಅಧ್ಯಕ್ಷರಾದ ಪ್ರೊ.ವೈ.ಮುನಿರಾಜು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಉದಯ ಕುಮಾರ್ ಎಂ.ಎ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ.ಎ.ಸಿದ್ಧಿಕ್ ಇವರ ನೇತೃತ್ವದಲ್ಲಿ ಹಾಗೂ ಇತರ ಉಪನ್ಯಾಸಕರ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here