ವಿದ್ಯುತ್ ಖರೀದಿಗೆ ಟೆಂಡರ್

0
148

ಬೆಂಗಳೂರು ಪ್ರತಿನಿಧಿ ವರದಿ
ರೈತರು, ಜನಸಾಮಾನ್ಯರಿಗೆ ಮುಂದಿನ ದಿನಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ತುರ್ತಾಗಿ ವಿದ್ಯುತ್ ಖರೀದಿ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
 
 
ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಭೀಕರ ಬರ ಇದೆ. ನೀರಾವರಿ ಪಂಪ್‍ಸೆಟ್‍ಗಳಿಂದಾಗಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಬೇಸಿಗೆಯಲ್ಲಿ ಸಮಸ್ಯೆ ಬಿಗಡಾಯಿಸಲಿರುವುದರಿಂದ ಹಿರಿಯ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆಯನ್ನು ಹೇಗೆ ನಿವಾರಣೆ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
 
 
 
ಈಗಾಗಲೇ 500 ಮೆಗಾವ್ಯಾಟ್ ವಿದ್ಯುತ್‍ನ್ನು ಸಕ್ಕರೆ ಕಾರ್ಖಾನೆಗಳಿಂದ ಖರೀದಿ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಮತ್ತೆ ಎಲ್ಲೆಲ್ಲಿಂದ ವಿದ್ಯುತ್ ಪಡೆಯಲು ಸಾಧ್ಯವಿದೆಯೋ ಅದರ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಒಟ್ಟಾರೆ ಮುಂದಿನ ಬೇಸಿಗೆ ವೇಳೆಗೆ ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here