ವಿಧಾನಮಂಡಲ ಅಧಿವೇಶನ ಆರಂಭ: ರಾಜ್ಯಪಾಲರ ಮಾತು

0
326

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. 5 ದಿನಗಳ ಕಾಳ ನಡೆಯುವ ಅಧಿವೇಶನದಲ್ಲಿ ರಾಜ್ಯ ರಾಜ್ಯಪಾಲ ವಜೂಭಾಯ್ ವಾಲಾ ಅವರು ಸಂಟಿ ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.
 
ರಾಜ್ಯದ ನೆಲ, ಜಲ ಭಾಷೆಯ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಫಲವಾಗಿದೆ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಕಳೆದ 4 ವರ್ಷಗಳಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
 
 
 
ರಾಜ್ಯ ಸರ್ಕಾರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರಾಜ್ಯ ಸರ್ಕಾರ ಕಾವೇರಿ, ಮಹದಾಯಿ ವಿಷಯದಲ್ಲಿ ಜನರ ಪರವಾಗಿದೆ. ಭ್ರಷ್ಟಾಚಾರ ಪ್ರಕರಣಗಳ ತನಿಖೆಗಳ ವಿಷಯದಲ್ಲಿ ರಾಜ್ಯ ಸರ್ಕಾರ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಿದೆ. ಪೊಲೀಸ್ ಹುದ್ದೆಗಳ ನೇಮಕ ಸೇರಿದಂತೆ ಇಲಾಖೆಯ ಸುಧಾರಣೆಗೆ ಶ್ರಮಿಸುತ್ತಿದೆ. ಹೈದ್ರಾಬಾದ್-ಕರ್ನಾಟಕ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದು, 1 ಸಾವಿರ ಕೋಟಿ ರೂ.ವನ್ನು ಮೀಸಲು ಇಟ್ಟಿದೆ ಎಂದು ರಾಜ್ಯಪಾಲ ವಜೂಭಾಯ್ ವಾಲಾ ಹೇಳಿದ್ದಾರೆ.
 
 
 
ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಬರು ಕಾಡುತ್ತಿದೆ. ಸರ್ಕಾರ ಬರಗಾಲವನ್ನು ಸಮರ್ಥವಾಗಿ ನಿರ್ವಹಿಸಿದೆ.ಡಾ.ನಂಜುಂಡ ವರದಿ ಅನುಷ್ಠಾನಕ್ಕೆ ಸರ್ಕಾರ ಒತ್ತು ನೀಡಿದೆ. ಜನಪರ ಆಡಳಿತ ನೀಡಲು ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸಲಾಗಿದೆ.ಎಸಿಬಿಗೆ ಬಂದ 3401 ಅರ್ಜಿಗಳ ಪೈಕಿ 2294 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.ಎಲ್ಲಾ ಜಿಲ್ಲೆಗಳಲ್ಲೂ ಎಸಿಬಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.
 
 
 
ಕಳೆದ 3 ವರ್ಷದಲ್ಲಿ 4.5 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗಿದೆ.ಆಟಿಇ ಅಡಿ ಅನನುದಾನಿತ ಶಾಲೆಗಳಲ್ಲಿ ಬಡವರ ಮಕ್ಕಳಿಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರ.

LEAVE A REPLY

Please enter your comment!
Please enter your name here