ವಿವಿಧೆಡೆ ಐಟಿ ದಾಳಿ

0
523

ಬೆಂಗಳೂರು ಪ್ರತಿನಿಧಿ ವರದಿ
ಇಂದು ರಾಜ್ಯದಲ್ಲಿ ಐಟಿ ಅಧಿಕಾರಿಗಳ ಕಾಂಗ್ರೆಸ್ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ಸಣ್ಣ ಕೈಗಾರಿಕಾ ಇಲಾಖೆಯ ಸಚಿವ ರಮೇಶ್ ಜಾರಕಿಗೊಳಿ ಮತ್ತು ಕಾಂಗ್ರೆಸ್ ನಾಯಕ ಜಾವೇದ್ ಮುಲ್ಲಾ ನಿವಾಸದ ಮೇಲೆ ದಾಳಿ ನಡೆದಿದೆ.
 
 
 
ಕರ್ನಾಟಕ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಕುವೆಂಪುನಗರದ ನಿವಾಸದ ಮೇಲೆ ದಾಳಿ ನಡೆದಿದೆ.ಐಟಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
 
 
ಸಣ್ಣ ಕೈಗಾರಿಕಾ ಇಲಾಖೆಯ ಸಚಿವ ರಮೇಶ್ ಜಾರಕಿಗೊಳಿ ನಿವಾಸದ ಮೇಲೂ ಐಟಿ ರೇಡ್ ಮಾಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿರುವ ಲಖನ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆದಿದೆ. ಜಾರಕಿಹೊಳಿ ಸೋದರನ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ.
 
 
ಕಾಂಗ್ರೆಸ್ ನಾಯಕ ಜಾವೇದ್ ಮುಲ್ಲಾ ಮನೆ ಮೇಲೂ ದಾಳಿ ನಡೆದಿದೆ. ಮೂವರ ಮನೆಗಳಲ್ಲೂ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here