ವಿಶ್ವಾಸಮತ ಯಾಚನೆಗೆ ಕೇಂದ್ರ ಸಮ್ಮತಿ

0
396

 
ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಾಖಂಡ್ ನಲ್ಲಿ ವಿಶ್ವಾಸಮತ ಯಾಚನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತನ್ನ ನಿಲುವನ್ನು ತಿಳಿಸಿದೆ.
 
ಸುಪ್ರೀಂ ಕೋರ್ಟ್ ನಿಲುವು ತಿಳಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿಲುವು ತಿಳಿಸಿದೆ. ನ್ಯಾಯಾಲಯದ ನಿಗಾದಲ್ಲಿ ಬಲಾಬಲ ಪರೀಕ್ಷೆ ನಡೆಸಲು ಸಿದ್ಧ ಎಂದು ಕೇಂದ್ರವು ಸುಪ್ರೀಂಕೋರ್ಟಿಗೆ ತಿಳಿಸಿದೆ. ಕೇಂದ್ರ ಸರ್ಕಾರ ವಿಶ್ವಾಸ ಮತ ಪ್ರಕ್ರಿಯೆಗೆ ಸಮಾಯಾವಕಾಶವನ್ನೂ ಕೇಳಿದೆ.
 
 
ಬಲಾಬಲ ಪರೀಕ್ಷೆಗೆ ವಿಧಿ ವಿಧಾನಗಳನ್ನು ಬಳಿಕ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅಟಾರ್ನಿ ಜನರಲ್ ಅವರು ಸುಪ್ರೀಂಕೋರ್ಟಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಉತ್ತರಾಖಂಡ ವಿಧಾನಸಭೆಯಲ್ಲಿ ಬಲಾಬಲ ಪರೀಕ್ಷೆ ನಡೆಯುವ ಸಾಧ್ಯತೆಗಳಿದ್ದು, ಬಿಕ್ಕಟ್ಟು ಇತ್ಯರ್ಥಗೊಳ್ಳುವ ಸಾಧ್ಯತೆಗಳಿವೆ.
ಸದ್ಯ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.
 
 
ದಿನಾಂಕ ಫಿಕ್ಸ್
ಉತ್ತರಾಖಂರ್ ನಲ್ಲಿ ಮೇ10ರಂದು ವಿಶ್ವಾಸ ಮತ ಯಾಚನೆಗೆ ದಿನಾಂಕ ಫಿಕ್ಸ್ ಆಗಿದೆ. 9 ಅನರ್ಹ ಕಾಂಗ್ರೆಸ್ ಶಾಸಕರು ಮತ ಚಲಾಯಿಸುವಂತಿಲ್ಲ ಎಂದು ಬಹುಮತ ಪರೀಕ್ಷೆಯ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

LEAVE A REPLY

Please enter your comment!
Please enter your name here