ವೆಸ್ಟ್ ಇಂಡೀಸ್ ಗೆ ಹಬ್ಬ

0
652

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಈಡನ್ ಗಾರ್ಡನ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 4 ವಿಕೆಟ್ ಗಳ ರೋಚಕ ಜಯ ದಾಖಲಿಸುವ ಮೂಲಕ 2016ನೇ ಸಾಲಿನ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.
 
ಕೋಲ್ಕತಾದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ವೆಸ್ಟ್ ಇಂಡೀಸ್ ತಂಡ 2ನೇ ಬಾರಿಗೆ ಚುಟುಕು ಕ್ರಿಕೆಟ್ ಚಾಂಪಿಯನ್ ಆಗುವ ಮೂಲಕ, 2 ಬಾರಿ ಚಾಂಪಿಯನ್ ಆದ ಹೆಗ್ಗಳಿಕೆಗೆ ಪಾತ್ರವಾಗಿದೆ.
 
ಇಂಗ್ಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳನ್ನು ಕಲೆಹಾಕಿತು. 156 ರನ್ ಗಳ ಟಾರ್ಗೆಟ್ ಹಿಂದಿದ್ದ ವೆಸ್ಟ್ ಇಂಡೀಸ್ ತಂಡ 19.4 ಓವರ್ ಗಳಲ್ಲಿ 161 ರನ್ ಸಿಡಿಸುವ ಮೂಲಕ ಫೈನಲ್ ನಲ್ಲಿ ಅಮೋಘ ಜಯ ದಾಖಲಿಸಿದೆ.
 
ಇಂಡೀಸ್ ವನಿತೆಯರಿಗೂ ಚಾಂಪಿಯನ್ ಪಟ್ಟ
ವಿಶ್ವಕಪ್ ಟಿ-20 ಪಂದ್ಯಾವಳಿಯ ಮಹಿಳಾ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ, ಮೂರು ಬಾರಿ ಚಾಂಪಿಯನ್ನರಾಗಿದ್ದ ಆಸ್ಟ್ರೇಲಿಯಾ ತಂಡವನ್ನು ಎಂಟು ವಿಕೆಟ್‌ಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
west indies lady vaarte

LEAVE A REPLY

Please enter your comment!
Please enter your name here