ಪ್ರಮುಖ ಸುದ್ದಿವಾರ್ತೆ

ವೈದ್ಯ ನಿವೃತ್ತಿ ವಯಸ್ಸು ಏರಿಕೆ

 
ರಾಷ್ಟ್ರೀಯ ಪ್ರತಿನಿಧಿ ವರದಿ
ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
 
 
ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಗುರುವಾರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸರ್ಕಾರಿ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬದಲಾವಣೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಎಲ್ಲ ವೈದ್ಯರಿಗೆ ಅನ್ವಯವಾಗಲಿದೆ’ ಎಂದಿದ್ದಾರೆ.
 
 
ಪ್ರಸ್ತುತ ವೈದ್ಯರ ನಿವೃತ್ತಿ ವಯಸ್ಸು 60. ಕೆಲವು ರಾಜ್ಯಗಳಲ್ಲಿ 62 ಇದೆ. ದೇಶಾದ್ಯಂತ 65ರ ವಯೋಮಿತಿ ನಿಗದಿಪಡಿಸಲು ಮುಂದಿನ ವಾರದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.
 
 
 
ಗರ್ಭಿಣಿಯರಿಗೆ ತಿಂಗಳಿಗೆ ಒಂದು ಬಾರಿ ಉಚಿತ ಚಿಕಿತ್ಸೆ ನೀಡಬೇಕು ಎಂದು ವೈದ್ಯರಲ್ಲಿ ಮನವಿ ಮಾಡಿದ ಮೋದಿ, ‘ಪ್ರತಿ ತಿಂಗಳ 9ನೇ ತಾರೀಕಿನಂದು ವೈದ್ಯರು ಗರ್ಭಿಣಿಯರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಬೇಕು’ ಎಂದಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here