ವೈವಾಹಿಕ ಜೀವನಕ್ಕೆ ಕಾಲಿಟ್ಟ ರೈ

0
192

ಬೆಂಗಳೂರು ಪ್ರತಿನಿಧಿ ವರದಿ
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರು ಎರಡನೇ ಬಾರಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಿಡದಿಯ ನಿವಾಸದಲ್ಲಿ ಸೋಮವಾರ ಅನುರಾಧ ಎಂಬುವರನ್ನು ಶಾಸ್ತ್ರೋಕ್ತವಾಗಿ ವರಿಸಿದ್ದಾರೆ. ಈ ಸಂದರ್ಭದಲ್ಲಿ ರೈ ಕುಟುಂಬ ಹಾಗೂ ಆಪ್ತರು ಮಾತ್ರ ಭಾಗವಹಿಸಿದ್ದರು.
 
 
ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ 2013ರಲ್ಲಿ ಅನಾರೋಗ್ಯದ ನಿಮಿತ್ತ ಸಿಂಗಾಪುರದಲ್ಲಿ ನಿಧನರಾಗಿದ್ದರು. ರೇಖಾ ಮತ್ತು ಮುತ್ತಪ್ಪ ರೈ ಅವರಿಗೆ ಎರಡು ಗಂಡು ಮಕ್ಕಳಿದ್ದು, ಅವರಿಬ್ಬರೂ ಮದುವೆಯಾಗಿದ್ದಾರೆ.
 
ಸಕಲೇಶಪುರದವರಾದ ಅನುರಾಧ ಅವರು ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಹಿಳಾ ಉದ್ಯಮಿಯಾಗಿರುವ ಅನುರಾಧ ಮತ್ತು ಮುತ್ತಪ್ಪ ರೈ ಮಧ್ಯೆ ಹಲವು ವರ್ಷಗಳ ಪರಿಚಯವಿತ್ತು. ರೇಖಾ ರೈ ನಿಧನದ ನಂತರ ಇದೀಗ ಇಬ್ಬರು ಎರಡನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

LEAVE A REPLY

Please enter your comment!
Please enter your name here