ಶಂಕಿತ ಉಗ್ರರ ಬಂಧನ

0
185

 
ರಾಷ್ಟ್ರೀಯ ಪ್ರತಿನಿಧಿ ವರದಿ
ಶಂಕಿತ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ದೆಹಲಿ ಪೊಲೀಸರು ಬುಧವಾರ ಬೆಳಗ್ಗೆ ದಿಢೀರ್ ಕಾರ್ಯಾಚರಣೆ 12 ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
 
 
ದೆಹಲಿ ವಿಶೇಷ ಪೊಲೀಸ್ ಪಡೆ ಹಾಗೂ ಗುಪ್ತಚರ ಇಲಾಖೆ ಜಂಟಿಯಾಗಿ ಬುಧವಾರ ಬೆಳಗಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ 12 ಮಂದಿ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ದೆಹಲಿಯ ಎನ್ ಸಿಆರ್ ಪ್ರಾಂತ್ಯ ಮತ್ತು ಉತ್ತರ ಪ್ರದೇಶದ ಸಮೀಪವಿರುವ ಡಿಯೋಬಂದ್ ನಲ್ಲಿ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಡೆಸಿದ ದಾಳಿಯಲ್ಲಿ 12 ಮಂದಿ ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
 
 
ಶಂಕಿತ ಉಗ್ರರನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಉಗ್ರರ ಕುರಿತಾದ ಮಾಹಿತಿಯ ಬಗ್ಗೆ ಯಾವುದೇ ವಿಚಾರಗಳನ್ನು ದೆಹಲಿ ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ದಾಳಿಯ ವೇಳೆ ಭಾರೀ ಪ್ರಮಾಣದ ಸ್ಪೋಟಕಗಳು, ಬಾಂಬ್ ತಯಾರಿ ವಸ್ತುಗಳು, ಐಇಡಿ ತಯಾರಿಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here