ಶನಿ ದೇಗುಲಕ್ಕೆ ನೋ ಎಂಟ್ರಿ!

0
417

ರಾಷ್ಟ್ರೀಯ ಪ್ರತಿನಿಧಿ ವರದಿ
ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿರುವ ಐತಿಹಾಸಿಕ ಶನಿಸಿಂಗಣಾಪುರ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ಇನ್ನೂ ಅಂತ್ಯ ಕಂಡಿಲ್ಲ. ದೇಗುಲಕ್ಕೆ ಪ್ರವೇಶಿಸಲು ಯತ್ನಿಸಿದ ಭೂಮಾತಾ ಬ್ರಿಗೇಡ್ ಸಂಘಟನೆ ಅಧ್ಯಕ್ಷೆ ತೃಪ್ತಿ ದೇಸಾಯಿಯನ್ನು ವಶಕ್ಕೆ ಪಡೆಯಲಾಗಿದೆ.
 
ತೃಪ್ತಿ ಸೇರಿದಂತೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ ಶನಿಸಿಂಗಣಾಪಿರ ದೇಗುಲದ ಬಳಿ ಬಿಗುವಿನ ವಾತಾವರಣವಿದೆ. ಪೊಲೀಸರು ಹಾಗೂ ಮಹಿಳೆಯರ ಮಧ್ಯೆ ತಳ್ಳಾಟ, ನೂಕಾಟ ಏರ್ಪಟ್ಟಿದೆ.
 
 
ನಿನ್ನೆ ಮಹಿಳೆಯರ ದೇಗುಲ ಪ್ರವೇಶಕ್ಕೆ ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುಮಾರು 25 ಮಹಿಳೆಯರು ದೇಗುಲಕ್ಕೆ ಆಗಮಿಸಿದ್ದರು. ದೇವಾಲಯದ ಒಳಕ್ಕೆ ಬಿಡಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ. ಆದರೆ ಆ ಗ್ರಾಮದ ಮತ್ತು ಸಂಪ್ರಾದಯಸ್ಥ ಮಹಿಳೆಯರು ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲದಂತಾಗಿದೆ.
ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ತೃಪ್ತಿ ದೇಸಾಯಿಯನ್ನು ವಶಕ್ಕೆ ಪಡೆಯಲಾಗಿದೆ.
 
 
ಕೋರ್ಟ್ ತೀರ್ಪು:
ದೇವಸ್ಥಾನ ಪ್ರವೇಶ ಮಹಿಳೆಯ ಮೂಲಭೂತ ಹಕ್ಕು ಅಂತ ಬಾಂಬೆ ಕೋರ್ಟ್ ನಿನ್ನೆ ತೀರ್ಪು ನೀಡಿತ್ತು. ಮಹಿಳೆಯ ಮೂಲಭೂತ ಹಕ್ಕನ್ನು ರಕ್ಷಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬ್ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಿಂದ ಕೋರ್ಟ್ ಆದೇಶವನ್ನು ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಎದ್ದು ಕಾಣುತ್ತಿದೆ.
ಕೋರ್ಟ್ ತೀರ್ಪಿಗೆ ದೇವಾಲಯದ ಆಡಳಿತ ಮಂಡಳಿ ವಿರೋಧಿಸಿದೆ. ಬಾಂಬ್ ಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೊಗಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

LEAVE A REPLY

Please enter your comment!
Please enter your name here