ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ?

0
2792

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೂ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಈ ಹಿಂದೆ ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು, ಈ ತೀರ್ಪು ಭಾರಿ ಚರ್ಚೆಗೂ ಕಾರಣವಾಗಿತ್ತು, ಇದೀಗ 40 ವರ್ಷಕ್ಕಿಂತ ಕಿಡಮೆ ವಯೋಮಾನದ ಇಬ್ಬರು ಮಹಿಳೆಯರು ದೇಗುಲದ ಗರ್ಭಗುಡಿ ಪ್ರವೇಶಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಕಳೆದ ವಾರ ದೇಗುಲ ಪ್ರವೇಶಕ್ಕೆ ಯತ್ನಿಸಿ ವಿಫಲರಾಗಿದ್ದ ಬಿಂದು ಮತ್ತು ಕನಕದುರ್ಗಾ ಎಂಬ ಮಹಿಳೆಯರಿಬ್ಬರು ಬುಧವಾರ ಬೆಳಗಿನ ಜಾವ 3:30ಕ್ಕೆ ಅಯ್ಯಪ್ಪನ ದರ್ಶನ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಪೊಲೀಸ್‌ ಬೆಂಗಾವಲಿನೊಂದಿಗೆ ಈ ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಹಿಂದೆ ಅನೇಕ ಮಹಿಳೆಯರು ದೇಗುಲ ಪ್ರವೇಶಕ್ಕೆ ಪ್ರಯತ್ನ ಪಟ್ಟು ವಿಫಲರಾಗಿದ್ದರು ಆದರೆ ಇದೆ ಮೊದಲ ಭಾರಿಗೆ ಮಹಿಳೆಯರಿಬ್ಬರು ದೇಗುಲ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here