ಶಶಿಕಲಾಗೆ ನೋಟಿಸ್

0
123

ಬೆಂಗಳೂರು ಪ್ರತಿನಿಧಿ ವರದಿ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ವಿವಾದದಲ್ಲಿ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
 
 
 
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಕೆ ಶಶಿಕಲಾ ನಟರಾಜನ್ ಗೆ ಒಂದು ವಾರದಲ್ಲಿ ಉತ್ತರ ಸಲ್ಲಿಸುವಂತೆ ಆಯೋಗ ಸೂಚನೆ ನೀಡಿದೆ.
 
 
ಆದ್ರೆ ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಆಯ್ಕೆ ಬಗ್ಗೆ ಆಕ್ಷೇಪವಿತ್ತು. ಎಐಎಡಿಎಂಕೆ ಬೈಲಾದಂತೆ ಆಯ್ಕೆಯಾಗಿಲ್ಲವೆಂದು ಆಕ್ಷೇಪಣೆ ವ್ಯಕ್ತವಾಗಿತ್ತು.ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಶಶಿಕಲಾಗೆ ನೋಟಿಸ್ ಜಾರಿಯಾಗಿದೆ.

LEAVE A REPLY

Please enter your comment!
Please enter your name here