ಮಂಡ್ಯ ಪ್ರತಿನಿಧಿ ವರದಿ
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋದಕ್ಕೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನೀಡಿದ ರಜೆ ಇಂದೂ ಮುಂದುವರಿದಿದೆ.
ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಕೆಆರ್ ಎಸ್ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಸೆಪ್ಟಂಬರ್ 16ರವರೆಗೂ ನಿರ್ಬಂಧ ಹೇರುವಂತೆ ಮಂಡ್ಯ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಇಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖ್ಯಸ್ಥ ವಾಟಾಳ್ ನಾಗರಾಜ್ ಅವರು ಕೆಆರ್ ಎಸ್ ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ವಾಟಾಳ್ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.