ಸೋಮವಾರಪೇಟೆ ಪ್ರತಿನಿಧಿ ವರದಿ
ಒಎಲ್ ವಿ ಶಾಲೆಯಲ್ಲಿ ಶಾಲಾ ಘಟಿಕೋತ್ಸವ ಸಮಾರಂಭ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಸಿಸ್ಟರ್ ರಶ್ಮಿ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ರಾಮಚಂದ್ರಮೂರ್ತಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶಾಲೆಯಲ್ಲಿ ವಿನೂತನವಾಗಿ ಆಚರಿಸುತ್ತಿರುವ ಘಟಿಕೋತ್ಸವ ಕಾರ್ಯಕ್ರಮ ಇತರ ಶಾಲೆಗಳಿಗೂ ಮಾದರಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಸಿಆರ್ಪಿ ಲಕ್ಷ್ಮೀ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಸೇರಿನ್ ಫ್ಲೋರಾ, ಜೂಲಿ ಲಾರೆನ್ಸ್ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.