ರಾಜ್ಯವಾರ್ತೆ

” ಶಾಲೆ ಕಡೆ – ನನ್ನ ನಡೆ”

ಬೆಂಗಳೂರು ಪ್ರತಿನಿಧಿ ವರದಿ
ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವಂತಹ ಕೆಲಸ ಆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದರು.
 
 
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಇಂದು ಏರ್ಪಡಿಸಿದ್ದ ” ಶಾಲೆ ಕಡೆ – ನನ್ನ ನಡೆ” ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಗೃಹ ಸಚಿವರು ಇನ್ನೂ ಕೂಡಾ ಹಲವು ಸಮುದಾಯಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಂತಹವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಬೇಕು ಎಂದರು.
 
 
ಸಮಾಜದಲ್ಲಿ ಶಿಕ್ಷಿತರು ಹಾಗೂ ಸಾಕ್ಷರರ ಪ್ರಮಾಣ ಹೆಚ್ಚಿದಲ್ಲಿ ಪ್ರಜ್ಞಾವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾತನಾಡಿದ ಪರಮೇಶ್ವರ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ “ಮರಳಿ ಬಾ ಶಾಲೆಗೆ’ ಹಾಗೂ ಬಿಸಿಯೂಟ ಯೋಜನೆ ಕಾರ್ಯಕ್ರಮದಿಂದಾಗಿ ರಾಜ್ಯದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾಗಿತ್ತು ಹಾಗೂ ಶಾಲೆಯಿಂದ ವಂಚಿತರಾಗಿದ್ದ ಮಕ್ಕಳು ಶಾಲೆಗೆ ಬರಲು ಪ್ರಾರಂಭಿಸಿದ್ದರೂ ಎಂದು ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಇದೇ ಸಂದರ್ಭದಲ್ಲಿ ಗೃಹ ಸಚಿವರು ಕರೆ ನೀಡಿದರು.
 
 
ಹೊರದೇಶಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸದ ಪೋಷಕರುಗಳಿಗೆ ಶಿಕ್ಷೆ ವಿಧಿಸುತ್ತಾರೆ ಎಂದು ಕೇಳಿದ್ದೇವು. ಆ ರೀತಿಯ ಕಾನೂನು ನಮ್ಮ ದೇಶದಲ್ಲೂ ಜಾರಿಗೆ ತಂದಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
 
 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೊರತಂದ ಲಾಂಛನ ಹಾಗೂ ಅರಿವು ಮೂಡಿಸುವ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್ ಗೋಯಲ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ನಿರಂಜನಾರಾಧ್ಯ ಹಾಗೂ ಆಯೋಗದ ಸದಸ್ಯರು ಪಾಲ್ಗೊಂಡಿದ್ದರು.
 
 
ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here