ಶಾಸಕರ ಅಭಿಪ್ರಾಯದ ಬಳಿಕ ಸಂಪುಟ ವಿಸ್ತರಣೆ

0
993

ಬೆಂಗಳೂರು : ಶಾಸಕರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬ ನಿರ್ಧಾರ ಕೈಗೊಳ್ಳುವ ಬಗ್ಗೆ ಮೈತ್ರಿ ಶಾಸಕರು ನಿರ್ಧಾರ ಮಾಡಿದ್ದಾರೆ. ಅಸಮಾಧಾನಗೊಂಡವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕೋ ಅಥವಾ ಸಂಪುಟ ವಿಸ್ತರಣೆ ಮಾಡಬೇಕೋ ಎಂಬ ಗೊಂದಲ್ಲೆ ಉತ್ತರ ಕಂಡುಕೊಳ್ಳುವ ಪ್ರಯತ್ನಕ್ಕೆ ಕೈಯಿಕ್ಕಿದ್ದಾರೆ.

ಬೆಂಗಳೂರಿನ ಕುಮಾರ ಅತಿಥಿಗೃಹದಲ್ಲಿ ನಡೆದ ಮೈತ್ರಿ ನಾಯಕರ ಸಭೆಯಲ್ಲಿ ಸಂಪುಟ ವಿಸ್ತರಣೆ ವಿಚಾರಗಳು, ಆಪರೇಷನ್‌ ಕಮಲ, ಲೋಕಸಭಾ ಚುನಾವಣಾ ಫಲಿತಾಂಶದ ವಿಚಾರದಲ್ಲಿ ಕೂಲಂಕಶ ಚರ್ಚೆ ನಡೆಯಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಉಮ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಕೆ.ಪಿ.ಸಿ.ಸಿ.ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಡಿ.ಕೆ.ಶಿವಕುಮಾರ್‌ ಸಭೆಯಲ್ಲಿದ್ದರು.

ವಿವರ ನೀಡಲ್ಲ! : ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಂದಿನ ನಿರ್ಣಯಗಳ ಬಗ್ಗೆ ಚರ್ಚಿಸುತ್ತೇವೆ. ಸಭೆಯ ಸಮಗ್ರ ವಿವರ ನೀಡಲಾರೆ ಎಂದರು. ಮೈತ್ರಿ ಸರಕಾರ ಸ್ಥಿರವಾಗಿದೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ನಾಳೆ ದಿಲ್ಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಕುಮಾರ ಸ್ವಾಮಿ ತಿಳಿಸಿದರು. ರಾಹುಲ್‌ ಗಾಂಧಿಯವರನ್ನು ಭೇಟಿಮಾಡಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ ಎಂದು ಮನವೊಲಿಸುವುದಾಗಿ ಹೇಳಿದರು. ಪ್ರಧಾನಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here