ಶಿವಸೇನಾ ಸಂಸದನ ಗೂಂಡಾಗಿರಿ!

0
351

ರಾಷ್ಟ್ರೀಯ ಪ್ರತಿನಿಧಿ ವರದಿ
ಶಿವಸೇನಾ ಸಂಸದ ರವೀಂದ್ರ ಗಾಯಕ್ ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಶಿವಸೇನಾ ಸಂಸದ ಚಪ್ಪಲಿಯಲ್ಲಿ 25 ಬಾರಿ ಧಳಿಸಿದ್ದಾರೆ.
 
 
ಏರ್ ಇಂಡಿಯಾ ವಿಮಾನದಲ್ಲಿ ಬ್ಯುಸಿನೆಸ್ ದರ್ಜೆಯ ಸೀಟಿನಲ್ಲಿ ಕುಳಿತುಕೊಳ್ಳುವ ವಿಷಯದಲ್ಲಿ ಶಿವಸೇನಾ ಸಂಸದ ರವೀಂದ್ರ ಗಾಯಕ್ ವಾಡ್, ಏರ್ ಇಂಡಿಯಾದ ಡ್ಯೂಟಿ ಮ್ಯಾನೇಜರ್ ಗೆ ತನ್ನ ಚಪ್ಪಲಿಯಿಂದ ಹೊಡೆದಿದ್ದಾರೆ.
 
 
 
ಸಂಸದ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ”ಹೌದು, ನಾನು ಆತನಿಗೆ 25 ಬಾರಿ ಚಪ್ಪಲಿಯಲ್ಲಿ ಹೊಡೆದಿದ್ದೇನೆ. ಆತ ನನ್ನ ಜೊತೆ ಅಸಭ್ಯವಾಗಿ ನಡೆದುಕೊಂಡ” ಎಂದು ಗಾಯಕ್ ವಾಡ್ ಅವರು ಸುದ್ದಿಗಾರರ ಬಳಿ ಹೇಳಿಕೊಂಡಿದ್ದಾರೆ.
 
 
ಗಾಯಕ್ ವಾಡ್ ಪುಣೆಯಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆ ಸಂದರ್ಭದಲ್ಲಿ ಕುಳಿತುಕೊಳ್ಳುವ ಸೀಟು ವಿಚಾರದಲ್ಲಿ ಜಗಳ ಆರಂಭವಾಯಿತು.

LEAVE A REPLY

Please enter your comment!
Please enter your name here