ಶ್ರೀಗಳ ಆರೋಗ್ಯ ಚೇತರಿಕೆ

0
544

 
ತುಮಕೂರು ಪ್ರತಿನಿಧಿ ವರದಿ
ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
 
 
ಜ್ವರ-ಕಫ ಆಯಾಸದಿಂದ ಬಳಲುತ್ತಿದ್ದ ಶ್ರೀಗಳನ್ನು ನಿನ್ನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಇಂದು ಶ್ರೀಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
 
ಇಂದು ಮುಂಜಾನೆ ಶ್ರೀಗಳ ಆರೋಗ್ಯ ಪರೀಕ್ಷೆ ನಡೆಸಿದ ವೈದ್ಯರು ಶ್ರೀಗಳ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ. ಇಂದು ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
 
 
ಶ್ರೀಗಳು ಇಂದು ಮುಂಜಾನೆ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 5ಕ್ಕೆ ಎದ್ದು ಶಿವಲಿಂಗಕ್ಕೆ ಪೂಜೆ ನೆರವೇರಿಸಿದ್ದಾರೆ. ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮಿ ಸಿದ್ಧಗಂಗಾ ಮಠದಿಂದ ಪ್ರಸಾದ ತಂದಿದ್ದರು.

LEAVE A REPLY

Please enter your comment!
Please enter your name here