ಷೇರುಪೇಟೆಯ ಸೂಚ್ಯಂಕ ಚೇತರಿಕೆ

0
514

ರಾಷ್ಟ್ರೀಯ ಪ್ರತಿನಿಧಿ ವರದಿ
ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 412.71 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಬ್ಯಾಂಕಿಂಗ್ ಮತ್ತು ವಾಹನೋದ್ಯಮ ಕ್ಷೇತ್ರಗಳ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಷೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 412.71 ಪಾಯಿಂಟ್‌ಗಳ ಚೇತರಿಕೆ ಕಂಡು 25,358.42 ಅಂಕಗಳಿಗೆ ತಲುಪಿದೆ.ಕಳೆದ ಜನೆವರಿ ತಿಂಗಳಿನಿಂದ ಮೊದಲ ಬಾರಿಗೆ ಗರಿಷ್ಠ ಚೇತರಿಕೆ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 123.90 ಪಾಯಿಂಟ್‌ಗಳ ಚೇತರಿಕೆ ಕಂಡು 7,832.85 ಅಂಕಗಳಿಗೆ ತಲುಪಿದೆ.
 
ಮಹೀಂದ್ರಾ ಆಂಡ್ ಮಹೀಂದ್ರಾ, ಐಸಿಐಸಿಐ ಬ್ಯಾಂಕ್, ಭಾರ್ತಿ ಏರ್‌ಟೆಲ್, ವಿಪ್ರೋ, ಟಾಟಾ ಮೋಟಾರ್ಸ್, ಎಚ್‌ಯುಎಲ್, ಮಾರುತಿ ಸುಜುಕಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

LEAVE A REPLY

Please enter your comment!
Please enter your name here