ರಾಜ್ಯವಾರ್ತೆ

ಸಂವಾದ ಕಾರ್ಯಕ್ರಮ

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಇತ್ತೀಚೆಗೆ ರಾಜ್ಯದ ಇಲಾಖೆ ಎಲ್ಲಾ ಅಧಿಕಾರಿಗಳಿಗಾಗಿ “ಭೇಟಿ ಬಚಾವ್, ಭೇಟಿ ಪಡಾವೋ” ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
 
 
ಈ ಸಂದರ್ಭದಲ್ಲಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲೂ ಹೆಣ್ಣು ಮಕ್ಕಳನ್ನು ಸಂರಕ್ಷಿಸುವ ಅಗತ್ಯತೆ ಇದೆ. ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತವನ್ನು ಕಡಿಮೆ ಮಾಡುವುದಕ್ಕಾಗಿ ಈ ಯೋಜನೆ ರೂಪಿತವಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಹಾಗೂ ಅವರ ಘನತೆ ಹೆಚ್ಚಿಸಿ ಅವರಿಗೆ ಹೆಚ್ಚಿನ ಅವಕಾಶವನ್ನು ಒದಗಿಸಿಕೊಡುವ ಅಗತ್ಯತೆ ಇದೆ ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ರಮಗಳಲ್ಲಿ ಹೆಣ್ಣು ಮಕ್ಕಳನ್ನು ಸಂರಕ್ಷಿಸುವ ಹಾಗೂ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.
 
 
ಸಂವಾದ ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸ್ವಾಗತಿಸಿ ಮಾತನಾಡಿದ ಇಲಾಖೆಯ ಜಂಟಿ ನಿರ್ದೇಶಕ ಪಿ.ಎನ್. ಗುರುಮೂರ್ತಿ ಅವರು ಹೆಣ್ಣು ಮಕ್ಕಳ ಸಂಖ್ಯೆಯು ಗಂಡು ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆಯಾಗುತ್ತಿರುವು ಕಂಡುಬರುತ್ತಿದೆ. ಹೆಣ್ಣು ಮಕ್ಕಳ ಹುಟ್ಟುವಿಕೆಯ ಸಂಖ್ಯೆ ಗ್ರಾಮೀಣ ಮಟ್ಟ ಹಾಗೂ ಬುಡಕಟ್ಟಿನ ಸಮುದಾಯದಲ್ಲೂ ಕುಸಿಯುತ್ತಿರುವುದು ಕಂಡುಬಂದಿದೆ. ಇದನ್ನು ಹೋಗಲಾಡಿಸುವ ಅಗತ್ಯತೆ ಇದೆ ಎಂದು ಹೇಳಿದರು.
 
 
ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್.ಐ.ಪಿ.ಸಿ.ಸಿ.ಡಿ ಯ ಡಾ. ಬಿ.ಎಸ್. ಅನುರಾಧಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವೀಣಾ, ಸಹಾಯಕ ನಿರ್ದೇಶಕಿ ಅಲೀಮಾ ಅವರುಗಳು “ಭೇಟಿ ಬಚಾವ್,ಭೇಟಿ ಪಡಾವೋ” ಯೋಜನೆಯ ವಿವರಗಳನ್ನು ತಿಳಿಸಿದರು.
 
 
ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಜಂಟಿ ನಿರ್ದೇಶಕರುಗಳಾದ ಎಂ. ರವಿಕುಮಾರ್, ಎನ್. ಭೃಂಗೀಶ್ ಹಾಗೂ ಇಲಾಖೆಯ ರಾಜ್ಯದ ಎಲ್ಲಾ ಅಧಿಕಾರಿಗಳು ಪಾಲ್ಗೊಂಡಿದರು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here