ಸಂವಿಧಾನ ತಿದ್ದುಪಡೆ ಮಾಡಬೇಕು

0
297

ಬೆಂಗಳೂರು ಪ್ರತಿನಿಧಿ ವರದಿ
‘ಪ್ರಾಥಮಿಕ ಹಂತದ ಶಿಕ್ಷಣವನ್ನು ಆಯಾ ರಾಜ್ಯಗಳ ಮಾತೃಭಾಷೆಯಲ್ಲಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಉಳಿದಿರುವ ದಾರಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
 
 
 
ಕಂಠೀರವ ಕ್ರೀಡಾಂಗಣದಲ್ಲಿ ನಡೆದ 61 ನೇ ಕರ್ನಾಟಕ ರಾಜ್ಯೋತ್ಸವ ಭಾಷಣದಲ್ಲಿ ಮಾತನಾಡಿ , ಪ್ರಾಥಮಿಕ ಶಿಕ್ಷಣ ಬೋಧನೆಯಲ್ಲಿ ಕನ್ನಡವನ್ನು ಕಡ್ಡಾಯ ಮಾಧ್ಯಮವಾಗಿ ಮಾಡಲು ಶಾಸನ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.
 
‘ಈಗ ಕನ್ನಡ ಮಾಧ್ಯಮ ಶಿಕ್ಷಣ ಜಾರಿಗೆ ಮಾಡಲು ಸಂವಿಧಾನ ತಿದ್ದುಪಡಿಯೊಂದೇ ಉಳಿದಿರುವ ದಾರಿ.ಭಾಷಾ ಮಾಧ್ಯಮದ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದಿದ್ದೆ ,ಈಗಲೂ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಮತ್ತೂಮ್ಮೆ ಮನವಿ ಮಾಡುವೆ’ ಎಂದರು.

LEAVE A REPLY

Please enter your comment!
Please enter your name here