ಸಚಿವರಿಂದ ಬರ ಅಧ್ಯಯನ ಪ್ರವಾಸ

0
356

ನಮ್ಮ ಪ್ರತಿನಿಧಿ ವರದಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಬರಪೀಡಿತ ಪ್ರದೇಶದ ಅಧ್ಯಯನ ಸಮಿತಿ ರಚಿಸಿದ್ದು, ಮೈಸೂರು ವಿಭಾಗದ ಆರು ಜಿಲ್ಲೆಗಳಿಗೆ ಐವರು ಸಚಿವರ ತಂಡವನ್ನು ನೇಮಕ ಮಾಡಲಾಗಿದೆ. ಈ ತಂಡ ಡಿಸೆಂಬರ್ 15 ರಿಂದ 17 ರ ತನಕ ಬರಪೀಡಿತ ಪ್ರದೇಶವನ್ನು ಸಂದರ್ಶಿಸಿ ಅಧ್ಯಯನ ವರದಿ ಸಲ್ಲಿಸಲಿದೆ.
 
 
ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವರಾದ ಕಾಗೋಡು ತಿಮ್ಮಪ್ಪ ನೇತೃತ್ವದ ತಂಡದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ರಮೇಶ್ ಕುಮಾರ್, ಲೋಕೋಪಯೋಗಿ ಇಲಾಖೆ ಸಚಿವರಾದ ಎಚ್.ಸಿ.ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವರಾದ ಹೆಚ್.ಎಸ್.ಮಹದೇವಪ್ರಸಾದ್ ಇದ್ದಾರೆ.
 
 
 
ಡಿಸೆಂಬರ್ 15 ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆ, 16ರಂದು ಮೈಸೂರು ಮತ್ತು ಕೊಡಗು ಜಿಲ್ಲೆ, 17ರಂದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಸಚಿವರ ತಂಡ ಅಧ್ಯಯನ ಪ್ರವಾಸ ನಡೆಸಲಿದೆ. ಈ ಮೂರೂ ದಿನಗಳಲ್ಲಿ ಈ ಹಿಂದೆ ನಿಗದಿಪಡಿಸಲಾಗಿದ್ದ ಸಚಿವರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

LEAVE A REPLY

Please enter your comment!
Please enter your name here