ಸಚಿವ ಸಂಪುಟ ಪುನಾರಚನೆ ಕಸರತ್ತು

0
155

 
ಬೆಂಗಳೂರು/ನವದೆಹಲಿ ಪ್ರತಿನಿಧಿ ವರದಿ
ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆಯುತ್ತಿದೆ. ರಾಜ್ಯ ಕೈ ಸಚಿವರು ಮಂತ್ರಿಮಂಡಲ ಸೇರಲು ಸರ್ಕಸ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಅಖಿಲ ಭಾರತ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಯಲಿದೆ.
 
 
 
ನಿನ್ನೆಯ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಅವರ ಜತೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ.
ಸೋನಿಯಾ ಹಿರಿಯ ನಾಯಕರಾದ ಸಿಎಂ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿದ್ ಅವರ ಜತೆ ಚರ್ಚೆಗೆ ಸೂಚಿಸಿದ್ದು, ಮಾತುಕತೆ ನಂತರ ಸಂಪುಟದ ಪಟ್ಟಿ ಅಂತಿಮಗೊಳಿಸಲಿದ್ದಾರೆ.
 
 
 
ಅಲ್ಲದೆ ಕಳೆದ ತಡರಾತ್ರಿ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಬಂಧ ನಾಯಕರ ನಡುವೆ ಚರ್ಚಿಸಿ ಸಂಪುಟದ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಇಂದು ಸಿಎಂ ನೂತನ ಪಟ್ಟಿಯನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ಜನಪಥ್ ರಸ್ತೆಯಲ್ಲಿರುವ ಸೋನಿಯಾ ನಿವಾಸ ಮಹತ್ವದ ಸಭೆ ನಡೆಯಲಿದೆ

LEAVE A REPLY

Please enter your comment!
Please enter your name here