ಸಜೀವ ದಹನವಾದ ಕಾರ್ಮಿಕರು

0
454

ರಾಷ್ಟ್ರೀಯ ಪ್ರತಿನಿಧಿ ವರದಿ
ಎಸಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲೇ 6 ಕಾರ್ಮಿಕರು ಸಜೀವ ದಹನವಾದ ಘಟನೆ ಹೈದರಾಬಾದ್ ನ ಅತ್ತಾಪುರದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.
 
 
 
ಬಿಹಾರ ಮೂಲದ 6 ಕಾರ್ಮಿಕರು ಜೀವಂತವಾಗಿ ಬೆಂಕಿಗಾಹುತಿಯಾಗಿದ್ದು, ಮೃತರನ್ನು ಇರ್ಫಾನ್, ಸದ್ದಾಂ, ಶಾರುಖ್ ಮತ್ತು ಅಯೂಬ್ ಖಾನ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
 
 
 
“ಎ1 ಏರ್ ಕೂಲರ್ಸ್” ತಂಡದ ಶೆಡ್ ಗೆ ಬೆಂಕಿ ಬಿದ್ದಿದ್ದು, ಅಗ್ನಿ ಅವಘಡಕ್ಕೆ ಏರ್ ಕೂಲರ್ ಒಂದರಲ್ಲಿನ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here