ಸಣ್ಣ ವ್ಯಾಪಾರಗಳಿಗೆ ರಿಲೀಫ್!

0
156

ರಾಷ್ಟ್ರೀಯ ಪ್ರತಿನಿಧಿ ವರದಿ
ಸಣ್ಣ ವ್ಯಾಪಾರಿಗಳ ವಾರ್ಷಿಕ ವಹಿವಾಟು 2 ಕೋಟಿಯವರೆಗೆ ಇದ್ದರೆ ಅವರು ಶೇಕಡ 8ರಷ್ಟು ಆದಾಯ ತೆರಿಗೆ ಕಟ್ಟಬೇಕಾಗುತ್ತದೆ. ಅದೇ ವ್ಯಾಪಾರಿಗಳು ತಮ್ಮ ವ್ಯವಹಾರಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ಮಾಡಿದರೆ ಶೇಕಡ 2ರಷ್ಟು ವಿನಾಯಿತಿ ನೀಡಲಾಗುವುದು. ತಮ್ಮ ಆದಾಯದ ಮೇಲೆ ಶೇಕಡಾ 6ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಇದರಿಂದ ಅವರಿಗೆ ಭಾರೀ ಅನುಕೂಲವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
 
 
 
ಇತ್ತೀಚಿನ ದಿನಗಳಲ್ಲಿ ಡೆಬಿಟ್, ಕ್ರೆಡಿಟ್ ಕಾರ್ಡುಗಳ ಬಳಕೆ ಜಾಸ್ತಿಯಾಗಿದೆ. ವ್ಯಾಪಾರ, ವಹಿವಾಟುಗಳಲ್ಲಿ ಮೊಬೈಲ್ ವ್ಯಾಲೆಟ್ ಮತ್ತು ಇ-ಪೇಮೆಂಟ್ ಗಳು ಕೂಡ ಹೆಚ್ಚಾಗಿವೆ ಎಂದು ಜೇಟ್ಲಿ ಹೇಳಿದರು.

LEAVE A REPLY

Please enter your comment!
Please enter your name here