ಸದನದಲ್ಲಿ ಜಾರ್ಜ್ ರಾಜೀನಾಮೆಗೆ ಒತ್ತಾಯ

0
500

 
ಬೆಂಗಳೂರು ಪ್ರತಿನಿಧಿ ವರದಿ
ಮಂಗಳೂರು ಡಿವೈಎಸ್​ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸೋಮವಾರ ಆರಂಭಗೊಂಡ ವಿಧಾನಮಂಡಲ ಕಲಾಪದ ಆರಂಭದಲ್ಲಿಯೇ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದರು. ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದನದ ಬಾವಿಗಿಳಿದು ಪ್ರತಿಭಟಿಸಿತು. ಪರಿಣಾಮ ಕೆಲ ಸದನದಲ್ಲಿ ಕೋಲಾಹಲ ಸೃಷ್ಟಿಯಾಯಿತು.
 
 
 
ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಪ್ರತಿಭಟನೆಯ ನಡುವೆಯೇ ಸರ್ಕಾರ ಸಭೆಗೆ ಉತ್ತರ ನೀಡುವ ಪ್ರಯತ್ನ ನಡೆಸಿತು. ಕಲಾಪದ ಆರಂಭದಲ್ಲಿಯೇ ವಿಪಕ್ಷ ನಾಯಕರಾದ ಜಗದೀಶ ಶೆಟ್ಟರ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್. ಅಶೋಕ್ ಸೇರಿದಂತೆ ಉಳಿದೆಲ್ಲಾ ನಾಯಕರು ಪ್ರಕರಣದಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ ಕಿವಿ ಹಿಂಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಕ್ರಮ ಸಮರ್ಥಿಸಿಕೊಳ್ಳಲು ಮುಂದಾದರೂ ಅದಕ್ಕೆ ವಿಪಕ್ಷ ಅವಕಾಶ ಮಾಡಿಕೊಡಲಿಲ್ಲ. ಆದರೂ ಗದ್ದಲದ ನಡುವೆಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಭೆಗೆ ಸರ್ಕಾರದ ಉತ್ತರವನ್ನು ಓದಲು ಮುಂದಾದರು. ವಿಪಕ್ಷ ನಾಯಕರ ಪ್ರತಿಭಟನೆಯ ಕಾವು ಜಾಸ್ತಿಯಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಕಲಾಪವನ್ನು 12.30ಕ್ಕೆ ಮುಂದೂಡಿದರು.
 
 
 
ಈ ನಡುವೆ ಬಿಜೆಪಿ ಭಿತ್ತಿ ಪತ್ರಗಳನ್ನು ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆಯನ್ನು ಮುಂದುವರಿಸಿದೆ. ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪ ಎದುರಿಸುತ್ತಿರುವ ಸಚಿವ ಜಾರ್ಜ್ ರಾಜೀನಾಮೆಗೆ ಪಟ್ಟು ಹಿಡಿದಿದೆ.

LEAVE A REPLY

Please enter your comment!
Please enter your name here