ಸನ್ಮಾನ

0
264

ನಮ್ಮ ಪ್ರತಿನಿಧಿ ವರದಿ
ದ.ಕ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆಯಿತು.
 
 
ಈ ಕಾರ್ಯಕ್ರಮವನ್ನು ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಮೋರ್ಚಾಗಳಲ್ಲಿ ಬಿಜೆಪಿ ಯುವ ಮೋರ್ಚಾವು ಬಲಿಷ್ಠವಾಗಿದ್ದು, ಪ್ರತಿಯೊಬ್ಬ ಜವಾಬ್ದಾರಿಯುತ ಯುವ ಮೋರ್ಚಾ ಕಾರ್ಯಕರ್ತರು ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಶಕ್ತಿ ಮೀರಿ ಕೆಲಸ ಮಾಡಬೇಕೆಂದು ಕರೆ ನೀಡಿದರು. ತದ ನಂತರ ಮಂಗಳೂರಿಗೆ ಸ್ಮಾರ್ಟ್ ಸಿಟಿ ಮತ್ತು ಅಮೃತ್ ಯೋಜನೆಯನ್ನು ತರಲು ನೇತೃತ್ವ ವಹಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಯುವ ಮೋರ್ಚಾ ದ.ಕ ಜಿಲ್ಲೆ ವತಿಯಿಂದ ಸನ್ಮಾನಿಸಲಾಯಿತು.
 
 
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದಂತಹ ಹರೀಶ್ ಪೂಂಜ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸಂಜೀವ ಮಠಂದೂರು , ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕರಾದಂತಹ ಕ್ಯಾ|ಗಣೇಶ್ ಕಾರ್ಣಿಕ್, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್, ಸುದರ್ಶನ್ ಎಂ, ಕ್ಯಾ|ಬ್ರಿಜೇಶ್ ಚೌಟ , ಸಹ ಉಸ್ತುವಾರಿ ದರ್ಶನ್ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಶಿವರಂಜನ್, ದಕ್ಷಿಣ ಮಂಡಲದ ಅಧ್ಯಕ್ಷರಾದ ವೇದವ್ಯಾಸ್ ಕಾಮತ್,ಜಿತೇಂದ್ರ ಕೊಟ್ಟಾರಿ, ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರಥ್ವಿರಾಜ ಬಂಗೇರ, ಮಹೇಶ್, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.
 
 
ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಯುವ ಮೋರ್ಚಾ ಸಂದೀಪ್ ಶೆಟ್ಟಿ ಮರವೂರು ಮತ್ತು ಜಿಲ್ಲಾ ಕಾರ್ಯದರ್ಶಿ ದಯಾನಂದ ಕೊಣಾಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here