ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

0
2584

ಮ0ಗಳೂರು ಪ್ರತಿನಿಧಿ ವರದಿ
ಪ್ರಜ್ಞಾ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಮಾಸಿಕ ರೂ.6000 ಗೌರವಧನ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
 
ಅರ್ಜಿ ಸಲ್ಲಿಸಲು ಜನವರಿ 2 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ , ಪೋಸ್ಟ್ ಬಾಸ್ಕ್ ನಂಬ್ರ 558, ಕಂಕನಾಡಿ , ಮಂಗಳೂರು -2,  ದೂರವಾಣಿ ಸಂಖ್ಯೆ 0824-2432682, ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here