ಸಮಾಧಿಗೆ ಪೂಜೆ ಸಲ್ಲಿಸದಿರಲು ನಿರ್ಧಾರ

0
254

ಬೆಂಗಳೂರು ಪ್ರತಿನಿಧಿ ವರದಿ
ಸೆ.18ರಂದು ಸಾಹಸಸಿಂಹ ಡಾ.ವಿಷ್ಣುವರ್ಧನ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಡಾ.ವಿಷ್ಣುಕುಟುಂಬ ಈ ಬಾರಿ ಸಮಾಧಿಗೆ ಪೂಜೆ ಸಲ್ಲಿಸದಿರಲು ನಿರ್ಧರಿಸಿದೆ. ಬೆಂಗಳೂರಿನ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸದಿರಲು ತೀರ್ಮಾನಿಸಲಾಗಿದೆ.
 
 
 
ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ 5 ಎಕರೆ ಜಮೀನು ಮಂಜೂರಾಗಿದೆ. ಆದರೆ ಜಾಗದ ಕಾಗದಪತ್ರ ನಟಿ ಭಾರತಿ ವಿಷ್ಣುವರ್ಧನ್ ಅವರ ಕೈಸೇರಲಿಲ್ಲ. ಇನ್ನು 4 ತಿಂಗಳಲ್ಲಿ ವಿಷ್ಣುವರ್ಧನ್ ಸ್ಮಾರಕ ಕೆಲಸಕ್ಕೆ ಚಾಲನೆ ನೀಡಲಾಗುತ್ತದೆ. ನಮ್ಮ ಇಚ್ಛೆಯಂತೆ ಮೈಸೂರಿನಲ್ಲಿ ಸ್ಮಾರಕಕ್ಕೆ ಜಮೀನು ಸಿಕ್ಕಿದೆ. ಇನ್ನು ಬೆಂಗಳೂರಿನಲ್ಲಿ ಪೂಜೆ ಸಲ್ಲಿಸುವ ಪ್ರಮೇಯವೇ ಇಲ್ಲ ಎಂದು ಡಾ.ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸ್ಪಷ್ಟೀಕರಣ ನೀಡಿದ್ದಾರೆ.
 
 
 
ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಕಿಟೆಕ್ಟರ್ ಕಾಂಪಿಟೇಷನ್ ಇಡಲಾಗಿದೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ಸ್ಮಾರಕ ನಿರ್ಮಾಣದ ಜವಾಬ್ದಾರಿ ನೀಡಲಾಗುತ್ತದೆ ಎಂದು ಡಾ.ವಿಷ್ಣು ಕುಟುಂಬ ಮೂಲಗಳು ತಿಳಿಸಿದೆ.
ಡಾ.ವಿಷ್ಣುವರ್ಧನ್ ಜನ್ಮದಿನವನ್ನು ಆಚರಿಸಲು ವಿಷ್ಣು ಸೇನಾ ಸಮಿತಿ ಕೂಡ ನಿರ್ಧರಿಸಿದೆ. ಎಂದಿನಂತೆ ಈ ಬಾರಿಯೂ ಅನ್ನದಾನ, ರಕ್ತದಾನ ಕಾರ್ಯಗಳು ನಡೆಯಲಿದೆ.

LEAVE A REPLY

Please enter your comment!
Please enter your name here