ಸಮಾರೋಪ ಸಮಾರಂಭ

0
441

 
ವರದಿ/ಚಿತ್ರ: ಸುನೀಲ್ ಬೇಕಲ್
ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಮೊಬೈಲ್ ಪೋನ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಸ್. ಮೋಹನ್ ನಾರಾಯಣ್ರವರು ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ ಸ್ವಂತ ಉದ್ಯಮದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು, ನಿಮ್ಮ ಕೌಶಲ್ಯದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಎಂದು ಮಾರ್ಗದರ್ಶನ ನೀಡಿದರು.
 
 
 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಅರುಣ ವಿ.ಜೆ. ವಹಿಸಿ ಶಿಭಿರಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕರಾದ ಅಜಿತ್ ಕೆ. ರಾಜಣ್ಣವರ್ ಅತಿಥಿಗಳನ್ನು ಸ್ವಾಗತಿಸಿ, ಹಿರಿಯ ಉಪನ್ಯಾಸಕರುಗಳಾದ ಅನಸೂಯ ಕಾರ್ಯಕ್ರಮ ನಿರೂಪಿಸಿ, ಅಬ್ರಹಾಂ ಜೇಮ್ಸ್ ವಂದಿಸಿದರು. ತರಬೇತಿಯಲ್ಲಿ ಒಟ್ಟು 25 ಶಿಭಿರಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here