ಸಮಾರೋಪ ಸಮಾರಂಭ

0
604

 
ವರದಿ: ಸುನೀಲ್ ಬೇಕಲ್
ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಟಿವಿ ಅಳವಡಿಸುವಿಕೆ ಮತ್ತು ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು.
 
 
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದ ಕಛೇರಿ ಮೇನೇಜರ್ರವರಾದ ಶ್ರೀ ಹರೀಶ್ ರಾವ್ರವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ ರುಡ್ ಸೆಟ್ ಸಂಸ್ಥೆಯ ತರಬೇತಿ ವಿಶೇಷತೆ ಎನೆಂದರೆ ವೃತ್ತಿ ಕೌಶಲ್ಯದ ಜೊತೆಗೆ ಬದುಕುವ ಕಲೆಯನ್ನು ಇಲ್ಲಿ ಕಲಿಸಲಾಗುತ್ತದೆ.
 
 
ನಿಮ್ಮ ಯೋಚನೆಗಳನ್ನು ಕಾರ್ಯಗತಗೊಳಿಸಲು ಈ ತರಬೇತಿ ಕಾರ್ಯಕ್ರಮವು ಉಪಯೋಗಕ್ಕೆ ಬರುತ್ತದೆ ಎಂದು ಮಾರ್ಗದರ್ಶನ ನೀಡಿದರು, ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕಿಯಾದ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿ, ಸಂತೋಷ್ ಶೆಟ್ಟಿ ವಂದಿಸಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಗುರುರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here