ಸಮಾಲೋಚನಾ ಸಭೆ

0
327

ವರದಿ: ಸುನೀಲ್ ಬೇಕಲ್
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ದಿನಾಂಕ 2016ರ ಅಗೋಸ್ತು 31 ರಂದು ಅಖಿಲ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನವ ದೆಹಲಿಯಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವನ್ನು ಎಂಟನೆ ಪರಿಚ್ಛೇದಕ್ಕೆ ಸೇರಿಸುವ ಬಗ್ಯೆ ಮನವಿ ನೀಡಿದರು.
 
 
 
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಶೀಘ್ರದಲ್ಲಿಯೇ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು. ತುಳುವನ್ನು ಎಂಟನೆ ಪರಿಚ್ಚೇದಕ್ಕೆ ಸೇರಿಸಬೇಕೆಂಬುದು ತುಳುವರ ಬಹು ವರ್ಷಗಳ ಬೇಡಿಕೆಯಾಗಿದೆ. ಇದನ್ನು ಈಡೇರಿಸಬೇಕೆಂದು ಹೆಗ್ಗಡೆಯವರು ಪ್ರಧಾನಿಯವರನ್ನು ಒತ್ತಾಯಿಸಿದ್ದರು.
 
 
 
ಇದೀಗ ಅದರ ಮುಂದುವರಿದ ಭಾಗವಾಗಿ ಡಿಸೆಂಬರ್ 7 ರಂದು ಬುಧವಾರ ಕರ್ನಾಟಕ ರಾಜ್ಯದ ಎಲ್ಲಾ ಸಂಸದರನ್ನು ನವ ದೆಹಲಿಯಲ್ಲಿ ಕರ್ನಾಟಕ ಭವನಕ್ಕೆ ಆಹ್ವಾನಿಸಿದ್ದು ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಯೆ ಸಮಾಲೋಚನೆ ಮತ್ತು ಸಹಕಾರ ಕೋರಲು ನಿಶ್ಚಯಿಸಲಾಗಿದೆ.
 
 
 
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಂ. ಜಾನಕಿ ಬ್ರಹ್ಮಾವರ ಮತ್ತು ಪದಾಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here