ಸರಣಿ ಅಪಘಾತ: 8 ಬಲಿ

0
312

 
ಚಿತ್ರದುರ್ಗ ಪ್ರತಿನಿಧಿ ವರದಿ
ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದುರ್ಮರಣ ಹೊಂದಿದ್ದ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದೆ.
 
ಸರ್ಕಾರಿ ಬಸ್, ಖಾಸಗಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕ್ರೂಸರ್ ಚಾಲಕ ಸೇರಿ 7 ಮಂದಿ ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
 
ಮೃತರೆಲ್ಲರೂ ಬಳ್ಳಾರಿ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಚಳ್ಳಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕ್ರೂಸರ್ ವಾಹನ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿತ್ತು.

LEAVE A REPLY

Please enter your comment!
Please enter your name here