ಸರಣಿ ಅಪಘಾತ

0
254

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಬೈಕ್ ಮತ್ತು ಕಾರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಘಟನೆ ಇಂಡಿಯನ್ ಎಕ್ಸ್ ಪ್ರೆಸ್ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
 
 
ಒಂದು ಬೈಕ್ ಬಿಎಂಟಿಸಿ ಬಸ್ ಕೆಳಗೆ ಸಿಲುಕಿತ್ತು. ಸರಣಿ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಡಾ.ರಜನಿ, ಪಂಚಾಕ್ಷರಿ ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ. ಚಾಲಕನ ತಲೆಗೆ ಹೆಲ್ಮೆಟ್ ಒಡೆದು ಹೋಗುವಂತೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿರುವ ಡಾ.ರಜನಿ ಪತಿ, ಸೋದರನಿಂದ ಹಲ್ಲೆ ನಡೆದಿದೆ.
ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

LEAVE A REPLY

Please enter your comment!
Please enter your name here