ಸರಣಿ ಕೈವಶ ಮಾಡಿದ ಟೀಂ ಇಂಡಿಯಾ

0
563

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟಿ 20 ಪಂದ್ಯದಲ್ಲಿ ಭಾರತ 75 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಜತೆಗೆ 2-1 ಅಂತರದಿಂದ ಸರಣಿಯನ್ನು ಕೈವಶಮಾಡಿಕೊಂಡಿತ್ತು.
 
 
 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಇಂಗ್ಲೆಂಡ್ ಗೆ 203 ರನ್ ಗಳ ಬೃಹತ್ ಗುರಿಯನ್ನು ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 16.3 ಓವರ್ ಗಳಲ್ಲಿ 127 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಶರಣಾಯಿತು.
 
 
 
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಚೊಚ್ಚಲ ಅರ್ಧ ಶತಕ ಸಿಡಿಸಿದರು. 36 ಎಸೆತಗಳಲ್ಲಿ 2 ಸಿಕ್ಸರ್, 5 ಬೌಂಡರಿಯೊಂದಿಗೆ 56 ರನ್ ಸಿಡಿಸಿದ್ದು ಟೀಂ ಇಂಡಿಯಾ ರನ್ ಗತಿ ಏರಲು ಸಾಧ್ಯವಾಯಿತು.

LEAVE A REPLY

Please enter your comment!
Please enter your name here