ಸರ್ಕಾರಿ ಬಸ್ ಡಿಕ್ಕಿ 2 ಸಾವು

0
336

ಹಾಸನ ಪ್ರತಿನಿಧಿ ವರದಿ
ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಂದಲಿ ಬಳಿ ಸಂಭವಿಸಿದೆ.
 
 
 
ಅವಿನಾಶ್(21), ಕುಮಾರ್(22) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುವಿಗೆ ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
 
 
 
ಮೂವರು ವಿದ್ಯಾರ್ಥಿಗಳು ಕಾಲೇಜಿನಿಂದ ವಾಪಾಸುಗುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಬಸ್ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here