ಸರ್ಕಾರಿ ಬಸ್ ಪಲ್ಟಿ

0
282

ಶಿವಮೊಗ್ಗ ಪ್ರತಿನಿಧಿ ವರದಿ
ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾದ ಪರಿಣಾಮ 18 ಮಂದಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಳ್ಳಿ ಬಳಿ ಸಂಭವಿಸಿದೆ.
 
 
 
18 ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎದುರಿಗೆ ಬರುತ್ತಿದ್ದ ಬಸ್ ಗೆ ಡಿಕ್ಕಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಸ್ ಉರುಳಿದೆ.
 
 
 
ಗೊಂದಿಚಟ್ನಳ್ಳಿ ಗ್ರಾಮಸ್ಥರು ಬಸ್ ನಲ್ಲಿ ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಮಂಜುನಾಥ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here