ಸರ್ಕಾರಿ ಬಸ್ ಪಲ್ಟಿ

0
204

ಚಿತ್ರದುರ್ಗ ಪ್ರತಿನಿಧಿ ವರದಿ
ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚನ್ನಮ್ಮನಹಳ್ಳಿ ಬಳಿ ಸಂಭವಿಸಿದೆ.
 
 
ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಿರಿಯೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ಬಸ್ ಕಲಬುರ್ಗಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here