ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ

0
234

ಬೆಂಗಳೂರು ಪ್ರತಿನಿಧಿ ವರದಿ
ಎರಡು ಬಿಎಂಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರಿಗೆ ಗಾಯಗಳಾದ ಘಟನೆ ಬೆಂಗಳೂರಿನ ನಾಗವಾರ ಜಂಕ್ಷನ್ ಬಳಿ ಸಂಭವಿಸಿದೆ.
ಎರಡೂ ಬಸ್ ಗಳ ಚಾಲಕರು ಮತ್ತು ಇಬ್ಬರು ಪ್ರಯಾಣಿಕರು ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
 
 
ರಾಮಮೂರ್ತಿನಗರ-ಹೆಬ್ಬಾಳ ಮಾರ್ಗದ ಬಿಎಂಟಿಸಿ ಬಸ್ ಮತ್ತು ಶಿವಾಜಿನಗರ-ಯಲಹಂಕ ಮಾರ್ಗದ ಬಸ್ ಗಳ ನಡುವೆ ಈ ಅಪಘಾತ ಸಂಭವಿಸಿದೆ.ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here