ಸರ್ಜಿಕಲ್ ಆಪರೇಷನ್ ಗೆ ರಾಹುಲ್ ಮೆಚ್ಚುಗೆ

0
359

ರಾಷ್ಟ್ರೀಯ ಪ್ರತಿನಿಧಿ ವರದಿ
ಅಖಿಲ ಭಾರತ ಕಾಂಗ್ರೆಸ್ ಉಪಾಧ‍್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶಂಸಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯ ಸೀಮಿತ ದಾಳಿ ಹಿನ್ನೆಲೆಯಲ್ಲಿ ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 
 
 
ಉಗ್ರರ ವಿರುದ್ಧ ಪ್ರಧಾನಿ ನಿರ್ಧಾರ ಸರಿಯೆಂದು ರಾಹುಲ್ ಹೇಳಿದ್ದಾರೆ. ನಾನು, ನನ್ನ ಪಕ್ಷ ಮೋದಿ ನಿರ್ಧಾರವನ್ನು ಬೆಂಬಲಿಸುತ್ತದೆ. ಎರಡೂವರೆ ವರ್ಷದಲ್ಲಿ ಮೋದಿ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ದೆಹಲಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
 
 
ಲೋಕಸಭಾ ಚುನಾವಣೆ ಬಳಿಕ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎರಡು ವರ್ಷಗಳು ಕಳೆದರೂ ಇಲ್ಲಿಯವರೆಗೂ ಮೋದಿ ಅವರು ಕೈಗೊಂಡಿದ್ದ ತೀರ್ಮಾನಗಳನ್ನು ಟೀಕಿಸುತ್ತಿದ್ದ ರಾಹುಲ್ ಗಾಂಧಿ ಅದೇ ಮೊದಲ ಬಾರಿಗೆ ಮೋದಿ ಅವರನ್ನು ಪ್ರಶಂಸಿಸಿದ್ದಾರೆ.

LEAVE A REPLY

Please enter your comment!
Please enter your name here