ಸಲ್ಲುಗೆ ಮತ್ತೆ ಸಂಕಷ್ಟ

0
175

ಸಿನಿ ಪ್ರತಿನಿಧಿ ವರದಿ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೃಷ್ಣಮೃಗ ಬೇಟಿ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸಲ್ಮಾನ್ ವಿರುದ್ಧ ಶುಕ್ರವಾರ ನೋಟಿಸ್ ವೊಂದನ್ನು ಜಾರಿ ಮಾಡಿದೆ.
 
 
 
ಕೃಷ್ಣಮೃಗ ಬೇಟೆ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸುವಂತೆ ರಾಜಸ್ತಾನ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು. ಈ ಮನವಿಗೆ ಇಂದು ಒಪ್ಪಿಗೆ ಸೂಚಿಸಿರುವ ಸುಪ್ರೀಂಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನಟ ಸಲ್ಮಾನ್ ಖಾನ್ ಅವರಿಗೆ ನೋಟಿಸ್ ಜಾರಿಗೆ ಮಾಡಿದೆ.
 
ಪ್ರಕರಣ ಸಂಬಂಧ ಜು.25 ರಂದು ವಿಚಾರಣೆ ನಡೆಸಿದ್ದ ರಾಜಸ್ತಾನ ಹೈಕೋರ್ಟ್ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಗಿತ್ತು.

LEAVE A REPLY

Please enter your comment!
Please enter your name here