ಸಾಲ ಮರುಪಾವತಿ ಅವಧಿ ವಿಸ್ತರಣೆ

0
215

ರಾಷ್ಟ್ರೀಯ ಪ್ರತಿನಿಧಿ ವರದಿ
500, 1000 ರೂ. ಮುಖಬೆಲೆಯ ನೋಟುಗಳು ಬ್ಯಾನ್ ಆಗಿದ್ದರಿಂದ ನೋಟುಗಳ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಸಾಲ ಮರುಪಾವತಿ ಮಾಡಲು ಇದ್ದ ಅವಧಿಯನ್ನು 90 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಆರ್ ಬಿಐ ಅಧಿಕೃತವಾಗಿ ಪ್ರಕಟಿಸಿದೆ.
 
 
 
ನ.1 ರಿಂದ ಡಿ.31 ರವರೆಗೆ ಪಾವತಿ ಮಾಡಬೇಕಿರುವವರಿಗೆ ಮಾತ್ರ 90 ದಿನಗಳ ಹೆಚ್ಚುವರಿ ಕಾಲಾವಕಾಶ ಅನ್ವಯವಾಗಲಿದೆ ಎಂದು ಹೇಳಿದೆ. ಇದಕ್ಕೂ ಮುನ್ನ ನವೆಂಬರ್ 21 ರಂದು 60 ದಿನಗಳ ವರೆಗೆ ವಿಸ್ತರಿಸಿ ಆರ್ ಬಿಐ ಆದೇಶ ಹೊರಡಿಸಿತ್ತು.
 
 
 
ನವೆಂಬರ್‌ 1ರಿಂದ ಡಿಸೆಂಬರ್‌ 31ರೊಳಗೆ ಪಾವತಿಸಬೇಕಾಗಿದ್ದ 1 ಕೋಟಿ ರೂ. ಅಥವಾ ಅದಕ್ಕಿಂತ ಕಮ್ಮಿ ಸಾಲಗಳಿಗೆ ಈ ಹೆಚ್ಚುವರಿ ಕಾಲಾವಧಿ ಅನ್ವಯಿಸುತ್ತದೆ. ಒಂದು ಕೋಟಿ ರೂ ಗಿಂತ ಕಡಿಮೆ ಇರುವ ವ್ಯಾಪಾರ ಅಥವಾ ವೈಯಕ್ತಿಕ ವಿಭಾಗದ ದೀರ್ಘಾವಧಿಯ ಸಾಲ, ಬ್ಯಾಂಕೇತರ ಹಣಕಾಸು ಕಂಪನಿ (ಮೈಕ್ರೋ ಫೈನಾನ್ಸ್ ಸಂಸ್ಥೆ)ಗಳ ಸಾಲದ ಕಂತುಗಳಿಗೂ ಇದೇ ನಿಯಮ ಅನ್ವಯವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ

LEAVE A REPLY

Please enter your comment!
Please enter your name here