ಸಿಂಧು-ಸಾಕ್ಷಿಗೆ ಒಲಿದ ಖೇಲ್ ರತ್ನ

0
624

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಈ ಸಾಲಿನ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿಗಳಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದೆ.
 
 
ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕಂಚಿನ ಪದಕ ಗೆದ್ದ ಕುಸ್ತಿಪಟು ಸಾಕ್ಷಿ ಮಲಿಕ್, ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಹಾಗೂ ಶೂಟರ್ ಜೀತು ರಾಯ್ ಅವರನ್ನು ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
 
 
 
ಕರ್ನಾಟಕದ ಹಾಕಿ ಆಟಗಾರ ವಿ.ಆರ್.ರಘುನಾಥ್, ಕ್ರಿಕೆಟ್ ಆಟಗಾರ ಅಜಿಂಕ್ಯ ರಹಾನೆ, ಲಲಿತ್ ಬಾಬರ್, ಶಿವ ಥಾಪಾ ಹಾಗೂ ಅಪೂರ್ವಿ ಚಾಂಡೇಲಾ ಸೇರಿದಂತೆ 15 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ ದೀಪಾ ಕರ್ಮಾಕರ್ ಕೋಚ್ ಬಿಶ್ವೇಶ್ವರ್ ನಂದಿ ಸೇರಿದಂತೆ ಆರು ಮಂದಿಗೆ ಈ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here