ಸಿಎಂರಿಂದ ರಾಜ್ಯಪಾಲರ ಭೇಟಿ

0
383

 
ಬೆಂಗಳೂರು ಪ್ರತಿನಿಧಿ ವರದಿ
ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ವಿಶೇಷ ಅಧಿವೇಶನ ಕರೆದಿರುವ ಕುರಿತು ಅವರಿಗೆ ಮನವರಿಕೆ ಮಾಡಿಕೊಟ್ಟು, ಅನುಮತಿ ಕೋರಿದ್ದಾರೆ. ಇದಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ವಿಶೇಷ ಅಧಿವೇಶನ ನಡೆಸಲು ಅನುಮತಿ ನೀಡಿದ್ದಾರೆ.ಸಿಎಂ ಗೆ ಸಚಿವರಾದ ಟಿ ಬಿ ಜಯಚಂದ್ರ, ಮಹದೇವಪ್ರಸಾದ್, ಹೆಚ್ ಸಿ ಮಹದೇವಪ್ಪ ಸಾಥ್ ನೀಡಿದ್ದಾರೆ. ರಾಜ್ಯಪಾಲರ ಜೊತೆಗಿನ ಮಾತುಕತೆ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.
 
ದೆಹಲಿಯತ್ತ ಸಿಎಂ
ಕಾವೇರಿ ನೀರು ಬಿಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಹಾಗೂ ರಾಜ್ಯದ ಜಲಾಶಯಗಳ ಸ್ಥಿತಿಗತಿ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ.
ಪ್ರತಿ ನಿತ್ಯ ತಮಿಳುನಾಡಿಗ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪಾಲಿಸಿದರೆ ಕರ್ನಾಟಕದ ಕುಡಿಯುವ ನೀರಿಗೂ ತೊಂದರೆಯಾಗಲಿದೆ ಎಂಬ ಅಂಶವನ್ನು ಹಿರಿಯ ಮುಖಂಡರಿಗೆ ಹಾಗೂ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ವರಿಷ್ಠರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶದಿಂದ ಉಂಟಾಗಿರುವ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ವಿವರಿಸಲಿದ್ದಾರೆ.

LEAVE A REPLY

Please enter your comment!
Please enter your name here