ಸಿಎಂ ಆಗಿ ಪಳನಿಸ್ವಾಮಿ ಪದಗ್ರಹಣ

0
232

ಚೆನ್ನೈ ಪ್ರತಿನಿಧಿ ವರದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮಿಳುನಾಡು ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಪಳನಿಸ್ವಾಮಿ ಅವರು ಚೆನ್ನೈನ ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಮಿಳುಣಾಡಿನ 21ನೇ ಸಿಎಂ ಆಗಿ ಪದಗ್ರಹಣ ಮಾಡಿದ ಸಿಎಂ ಪಳನಿಸ್ವಾಮಿ ಜತೆ 30 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ.

LEAVE A REPLY

Please enter your comment!
Please enter your name here